ನವದೆಹಲಿ, ಏ 5 (DaijiworldNews/MS): ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿರುವ ಪ್ರಕರಣದ ತನಿಖೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದು, ಇದರಿಂದ ಬಿಎಸ್ ವೈ ನಿರಾಳರಾಗಿದ್ದಾರೆ.
ಯಡಿಯೂರಪ್ಪ ವಿರುದ್ಧದ ಅಪರಾಧಗಳನ್ನು ಪರಿಗಣಿಸಿ, 2012ರಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಆರೋಪಪಟ್ಟಿಯನ್ನು ಆಧರಿಸಿ ವಿಚಾರಣೆ ಮುಂದುವರಿಸುವಂತೆ ವಿಶೇಷ ನ್ಯಾಯಾಲಯಕ್ಕೆ ಕರ್ನಾಟಕ ಹೈಕೋರ್ಟ್ ಆದೇಶಿಸಿತ್ತು. ಆದರೆ ಈ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಬಿಎಸ್ ವೈ ಪರ ವಕೀಲರು ಅರ್ಜಿ ಸಲ್ಲಿಸಿದ್ದರು.
ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ವಸತಿ ಯೋಜನೆಗೆ 26 ಎಕರೆ ಭೂಮಿ ಮಂಜೂರು ಮಾಡಿದ ಬಗ್ಗೆ ಹಾಗೂ ನಕಲಿ ದಾಖಲೆ, ನಕಲಿ ಸಹಿ ಬಳಸಿ ಭೂಮಿಯನ್ನು ವಾಪಾಸ್ ಪಡೆದ ಬಗ್ಗೆ ತನಿಖೆ ನಡೆಸಬೇಕೆಂದು ಆದೇಶಿಸಲಾಗಿತ್ತು.
ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂ ಇದೀಗ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಹಾಗಾಗಿ ಸಿಎಂ ಯಡಿಯೂರಪ್ಪಅವರಿಗೆ ರಿಲೀಫ್ ಸಿಕ್ಕಂತಾಗಿದೆ.