ಬೆಂಗಳೂರು, ಎ.05 (DaijiworldNews/PY): ಕೊರೊನಾ ಸೋಂಕುಗೆ ತುತ್ತಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಅವರು ಕೊರೊನಾದಿಂದ ಗುಣಮುಖರಾಗಿದ್ದು, ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಸೋಮವಾರ ಅವರನ್ನು ಮಣಿಪಾಲ್ ಆಸ್ಪತ್ರೆಯ ಮುಖ್ಯಸ್ಥ ಡಾ.ಸುದರ್ಶನ್ ಬಲ್ಲಾಳ್ ಅವರು ಹೂ ಗುಚ್ಚ ನೀಡಿ, ಬೀಳ್ಗೊಟ್ಟರು.
ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೂ ಕೂಡಾ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್.ಡಿ.ದೇವೇಗೌಡ ದಂಪತಿಗಳು ಕೆಲ ದಿನಗಳ ಕಾಲ ಮನೆಯಲ್ಲೇ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ.
ಮಾರ್ಚ್ 31ರಂದು ಹೆಚ್.ಡಿ.ದೇವೇಗೌಡ ದಂಪತಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ತಮ್ಮ ಕುಟುಂಬ ಸದಸ್ಯರು ಐಷೋಲೇಷನ್ಗೆ ಒಳಗಾಗಲಿದ್ದಾರೆ. ತಮ್ಮ ಸಂಪರ್ಕಕ್ಕೆ ಬಂದವರೆಲ್ಲರೂ ಕೊರೊನಾ ಟೆಸ್ಟ್ಗೆ ಒಳಗಾಗುವಂತೆ ಸೂಚಿಸಿದ್ದರು.