ಬೆಂಗಳೂರು, ಏ 5 (DaijiworldNews/MS): ದಿನದಿನದಿಂದ ದಿನಕ್ಕೆ ತಿರುವು ಪಡೆಯುತ್ತಿರುವ ರಮೇಶ್ ಜಾರಕಿಹೊಳಿ ಅವರದು ಎನ್ನಲಾದ ಸಿಡಿ ಪ್ರಕರಣದ ಸಂತ್ರಸ್ತೆ ಯುವತಿ ಗುರುನಾನಕ್ ಭವನದ 32ನೇ ಎಸಿಎಂಎಂ ನ್ಯಾಯಾಲಯಕ್ಕೆ ಹೇಳಿಕೆ ದಾಖಲಿಸಲು ಬಂದಿದ್ದಾರೆ.
ಸಂತ್ರಸ್ತ ಯುವತಿಯ ಪೋಷಕರು ಆರ್ ಟಿ ನಗರ ಪೊಲೀಸ್ ಠಾಣೆಯಲ್ಲಿ ತಮ್ಮ ಮಗಳನ್ನು ಅಪಹರಿಸಲಾಗಿದೆ ಎಂದು ದೂರು ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮುಂದೆ ಸ್ವಇಚ್ಛಾ ಹೇಳಿಕೆ ದಾಖಲಿಸಲು ಬಂದಿದ್ದಾರೆ.
ಕೋರ್ಟ್ ಗೆ ಬರುವ ಮುನ್ನ ಯುವತಿಗೆ ಪೊಲೀಸ್ ಬಿಗಿ ಭದ್ರತೆ ನೀಡಲಾಗಿದ್ದು, ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಲಿದ್ದಾರೆ