ಬೆಳಗಾವಿ, ಏ 06(DaijiworldNews/MS): ಬೆಳಗಾವಿ ಲೋಕಸಭೆ ಉಪಚುನಾವಣೆ ಸಮಯದಲ್ಲೇ ಪ್ರಮುಖ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ ಬಿಜೆಪಿ ಸೇರಲು ಸಜ್ಜಾಗಿದ್ದಾರೆ. ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಹಗರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಹೆಸರು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೋಲಿಸಲು ರಮೇಶ್, ಬಾಲಚಂದ್ರ ಮತ್ತು ಲಖನ್ ಜಾರಕಿಹೊಳಿ ಒಗ್ಗಟ್ಟಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ.
ಚುನಾವಣೆಯ ಉಸ್ತುವಾರಿ ವಹಿಸಿಕೊಂಡಿರುವ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ , ಬಿಜೆಪಿ ಅಬ್ಯರ್ಥಿ ಮಂಗಳಾ ಅಂಗಡಿಯವರು ಸ್ವತಂ ಲಖನ್ ಅವರ ಮನೆಗೆ ಭೇಟಿ ನೀಡಿದ ಬೆನ್ನಲ್ಲೇ ಮಹತ್ವದ ಬೆಳಾವಣಿಗೆ ನಡೆದಿದ್ದು ಇದು ಕಾಂಗ್ರೆಸ್ ಗೆ ಅಘಾತ ತಂದಿದೆ. "ಪಕ್ಷದೊಳಗಿನ ಗುಂಪುಗಾರಿಕೆಯಿಂದ ಹಾಗೂ ಇತ್ತೀಚೆಗಿನ ಬೆಳವಣಿಗೆಯಿಂದ ಘಾಸಿಗೊಂಡು ನಾನು ಈ ಬಾರಿ ಬಿಜೆಪಿಗೆ ಬೆಂಬಲ ವ್ಯಕ್ತಪಡಿಸುತ್ತೇನೆ " ಎಂದು ಮಾದ್ಯಮಗಳಿಗೆ ಲಖನ್ ಪ್ರತಿಕ್ರಿಯಿಸಿದ್ದಾರೆ.
ಸತೀಶ್ ಜಾರಕಿಹೊಳಿ ಬಲಗೈ ಬಂಟನಾಗಿದ್ದ ಸಹೋದರ ಲಖನ್ ಜಾರಕಿಹೊಳಿ ಬಿಜೆಪಿ ಪಾಳೇಯ ಸೇರಿದ್ದು ಕಾಂಗ್ರೆಸ್ ಗೆ ಆಘಾತವಾಗಿದೆ.. ಮೂವರು ಸಹೋದರರು ವಿರೋಧಿ ಬಣದಲ್ಲಿರುವ ಕಾರಣ ಸತೀಶ್ ಜಾರಕಿಹೊಳಿ ಅವರ ಗೆಲುವು ಸ್ವಲ್ಪ ಕಠಿಣವಾಗಲಿದೆ. ಸತೀಶ್ ಜಾರಕಿಹೊಳಿ ಅವರಿಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಇರಲಿಲ್ಲ, ಆದರೆ ಡಿಕೆ ಶಿವಕುಮಾರ್ ಮತ್ತು ಎಐಸಿಸಿ ಒತ್ತಾಯದ ಮೇರೆಗೆ ಸ್ಪರ್ಧಿಸಲು ಒಪ್ಪಿದರು ಎಂದು ಹೇಳಲಾಗಿದೆ.