ಬೆಂಗಳೂರು, ಏ. 06 (DaijiworldNews/HR): "ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಅನಗತ್ಯ ಗುಂಪುಗೂಡುವುದನ್ನು ಬಿಡಬೇಕು. ನಾವು ಪದೇ ಪದೆ ಎಚ್ಚರಿಕೆ ಕೊಡುತ್ತಿದ್ದೇವೆ, ಜನರು ನಡವಳಿಕೆ ಸುಧಾರಣೆ ಮಾಡಿಕೊಳ್ಳಬೇಕು. ಲಾಕ್ಡೌನ್ ಅಥವಾ ಕರ್ಫ್ಯೂ ಬೇಡ ಎಂದಾದರೆ ಜನರೇ ಎಚ್ಚರಿಕೆಯಿಂದ ಇರಬೇಕು" ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನಿನ್ನೆಯಷ್ಟೇ 33 ಸಾವಿರ ಹಾಸಿಗೆ ಸಿದ್ಧ ಮಾಡಿದ್ದು, ಇದರಲ್ಲಿ 10,083 ಆಕ್ಸಿನೇಟೇಡ್ ಬೆಡ್ ಮಾಡಲಾಗಿದೆ. ಕೊರೊನಾಗಾಗಿ ಹಾಸಿಗೆಗಳನ್ನು ಮೀಸಲಿಡಲಾಗುತ್ತದೆ. ನಿನ್ನೆವರೆಗೆ ಒಟ್ಟು 48.5ಲಕ್ಷ ಜನರಿಗೆ ಲಸಿಕೆ ನೀಡಲಾಗಿದ್ದು, ದೇಶದಲ್ಲಿ ಲಸಿಕೆ ನೀಡುವಲ್ಲಿ ರಾಜ್ಯಕ್ಕೆ ಆರನೇ ಸ್ಥಾನವಿದೆ" ಎಂದರು.
ಇನ್ನು ಸೋಮವಾರ ಕೊರೊನಾ ಪ್ರಕರಣಗಳು ಹೆಚ್ಚಾಗಿ ಕಂಡುಬಂದಿದ್ದು, ದೇಶದಲ್ಲಿ ಒಂದು ಲಕ್ಷ ಸೋಂಕಿತರು ಪತ್ತೆಯಾಗಿದ್ದು 32 ಮಂದಿ ಸಾವನ್ನಪ್ಪಿದ್ದಾರೆ" ಎಂದು ತಿಳಿಸಿದ್ದಾರೆ.