ಬಳ್ಳಾರಿ, ಏ. 06 (DaijiworldNews/HR): ರಾಜ್ಯದಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಸಮನ್ವಯತೆಯ ಕೊರತೆ ಎದ್ದು ಕಾಣುತ್ತಿದ್ದು, ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಚಿವ ಈಶ್ವರಪ್ಪ ನಾಲಾಯಕ್ ಎಂಬುದಾಗಿ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಅಕ್ರಮ ನಡೆದರು ಇಲ್ಲಿ ಹೇಳೋರು, ಕೇಳೋರು ಯಾರು ಇಲ್ಲದಂತೆ ಆಗಿದೆ" ಎಂದರು.
ಇನ್ನು ರಾಜ್ಯ ಸರ್ಕಾರದಲ್ಲಿ ಈಗ ಸಮನ್ವಯತೆಯೇ ಇಲ್ಲದಂತಾಇದ್ದು, ಭ್ರಷ್ಟಾಚಾರ, ಅಕ್ರಮವೇ ತಾಂಡವವಾಡುತ್ತಿದೆ. ಈ ಸರ್ಕಾರಕ್ಕೆ ಹೇಳೋರು, ಕೇಳೋರು ಯಾರೂ ಇಲ್ಲ. ಸ್ವತಹ ಸಚಿವ ಈಶ್ವರಪ್ಪನವರೇ ಸಿಎಂ ಯಡಿಯೂರಪ್ಪ ವಿರುದ್ಧ ಬಂಡಾಯವೆದ್ದಿದ್ದಾರೆ" ಎಂದು ಹೇಳಿದ್ದಾರೆ.