ಮುಂಬೈ, ಏ. 06 (DaijiworldNews/HR): "ಉದ್ಧವ್ ಠಾಕ್ರೆ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಮುಂದುವರಿಯುವ ನೈತಿಕತೆಯನ್ನು ಕಳೆದುಕೊಂಡಿದ್ದು, ಅವರು ಈ ಕೂಡಲೇ ರಾಜೀನಾಮೆ ನೀಡಬೇಕು" ಎಂದು ಕೇಂದ್ರ ಸಚಿವ ರಾಮದಾಸ್ ಅಠವಾಲೆ ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಅನಿಲ್ ದೇಶಮುಖ್ ಕೆಳಗಿಳಿದಿದ್ದಾರೆ. ಆದರೆ, ಅವರು ಇದ್ದಕ್ಕಿಂತ ಮೊದಲೇ ಕೆಳಗಿಳಿಯಬೇಕಿತ್ತು. ಇದು ಮಾತ್ರವಲ್ಲ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೂ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆಯನ್ನು ಕಳೆದುಕೊಂಡಿದ್ದು, ತಕ್ಷಣವೇ ರಾಜೀನಾಮೆ ನೀಡಬೇಕು" ಎಂದು ಒತ್ತಾಯಿಸಿದ್ದಾರೆ.
ಇನ್ನು "ದೇಶ್ಮುಖ್ ಅವರು ಈ ಮೊದಲೇ ಏಕೆ ರಾಜೀನಾಮೆ ನೀಡಲಿಲ್ಲ? ಮಾಜಿ ಪೊಲೀಸ್ ಕಮಿಷನರ್ ಪರಂ ಬೀರ್ ಸಿಂಗ್ ಅವರು ಮಾಡಿದ ಆರೋಪಗಳ ಬಗ್ಗೆ ಮುಂಬೈ ಹೈ ಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿದ ನಂತರವೇ ರಾಜೀನಾಮೆ ನೀಡಿದ್ದೇಕೆ?" ಎಂದೂ ಪ್ರಶ್ನಿಸಿದ್ದಾರೆ.