ಬೆಂಗಳೂರು, ಎ.06 (DaijiworldNews/PY): ಆರನೇ ವೇತನ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ರಾಜ್ಯಾದ್ಯಂತ ಮುಷ್ಕರ ಆರಂಭಿಸಿದ್ದು, ಬಸ್ ಸಂಚಾರ ಸ್ಥಗಿತಗೊಂಡಿದೆ. ಈ ನಡುವೆ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಸ್ಗಾಗಿ ಕಾಯುತ್ತಿದ್ದ ವೃದ್ದರೋರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಜಿಗಣಿಯಿಂದ ಬಂದಿದ್ದ ಚೆನ್ನಪ್ಪ (77) ಎಂಬವರು ಮೆಜೆಸ್ಟಿಕ್ನಲ್ಲಿ ಟೀ ಕುಡಿದು ಬಸ್ಗಾಗಿ ಕಾಯುತ್ತಿದ್ದರು. ಈ ವೇಳೆ ಅವರು ಏಕಾಏಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಸದ್ಯ ಮೃತದೇಹವನ್ನು ಆಂಬುಲೆನ್ಸ್ ಮೂಲಕ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಕೊರೊನಾ ಪರೀಕ್ಷೆಯ ಬಳಿಕ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರ ಮಾಡಲಾಗುತ್ತದೆ.