ನವದೆಹಲಿ, ಎ.07 (DaijiworldNews/MB) : ಪ್ರತಿಯೊಬ್ಬ ಭಾರತೀಯನು ಸುರಕ್ಷಿತ ಜೀವನಕ್ಕೆ ಅರ್ಹನಾಗಿದ್ದಾನೆ ಎಂದು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿಯವರು ಬುಧವಾರ ಹೇಳಿದ್ದಾರೆ.
ಕೊರೊನಾ ಲಸಿಕೆ ಬಗ್ಗೆ ಬುಧವಾರ ಟ್ವೀಟ್ ಮಾಡಿರುವ ಅವರು, ''ಅಗತ್ಯವಿರುವುದು ಹಾಗೂ ಬಯಕೆಯ ಬಗ್ಗೆ ಚರ್ಚಿಸುವುದು ಹಾಸ್ಯಾಸ್ಪದವಾಗಿದೆ. ಪ್ರತಿಯೊಬ್ಬ ಭಾರತೀಯನು ಸುರಕ್ಷಿತ ಜೀವನಕ್ಕೆ ಅರ್ಹನಾಗಿದ್ದಾನೆ'' ಎಂದು ಹೇಳಿದ್ದಾರೆ.
ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಕೊರೊನಾ ಲಸಿಕೆಗಳಿಗೆ ಜನವರಿ 16 ರಂದು ಪ್ರಧಾನಿ ಮೋದಿ ಅವರು ಚಾಲನೆ ನೀಡಿದ್ದಾರೆ. ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್ಗೆ ಲಸಿಕೆ ನೀಡಲಾಗಿದ್ದು ಈಗ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಲಸಿಕೆ ನೀಡಲಾಗುತ್ತಿದೆ. ಈವರೆಗೆ ಒಟ್ಟಾರೆ 8,70,77,474 ಮಂದಿಗೆ ಲಸಿಕೆ ನೀಡಲಾಗಿದೆ.