ಬೆಂಗಳೂರು, ಎ.08 (DaijiworldNews/PY): ಕೊರೊನಾ ಎರಡನೆ ಅಲೆ ಅಧಿಕವಾಗುತ್ತಿರುವ ಹಿನ್ನೆಲೆ ಇಂದು ಪ್ರಧಾನ ನರೇಂದ್ರ ಮೋದಿ ಅವರು ಸಿಎಂಗಳೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದು, ವಿಡಿಯೋ ಸಂವಾದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಪಾಲ್ಗೊಳ್ಳಲಿದ್ದಾರೆ.
ಇಂದು ಸಂಜೆ 6.30ಕ್ಕೆ ಸಿಎಂ ಗೃಹ ಕಚೇರಿ ಕೃಷ್ಣಾದಿಂದ ವಿಡಿಯೋ ಸಂವಾದದಲ್ಲಿ ಸಿಎಂ ಬಿಎಸ್ವೈ ಅವರು ಪಾಲ್ಗೊಳ್ಳಲಿದ್ದಾರೆ.
ರಾಜ್ಯದಲ್ಲಿ ಕೊರೊನಾದ ಎರಡನೇ ಅಲೆ ಹೆಚ್ಚಾಗುತ್ತಿದ್ದು, ಇದರ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪ್ರಧಾನಿ ಮೋದಿ ಮಾಹಿತಿ ಪಡೆದುಕೊಳ್ಳಲಿದ್ದಾರೆ. ನೆರೆಯ ರಾಜ್ಯಗಳಲ್ಲಿ ಕೂಡಾ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಕಾರಣ ಗಡಿಯಲ್ಲಿ ತೆಗೆದುಕೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮ, ಕೊರೊನ ತಪಾಸಣೆ ಹಾಗೂ ಮಾರ್ಗಸೂಚಿ ಪಾಲನೆಗೆ ಕಟ್ಟುನಿಟ್ಟಾದ ಕ್ರಮದ ಬಗ್ಗೆ ಚರ್ಚಿಸಲಾಗುತ್ತಿದೆ.
ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್ ವ್ಯವಸ್ಥೆ ಹಾಗೂ ಮುಂತಾದ ವಿಚಾರದ ಬಗ್ಗೆ ಪ್ರಧಾನಿ ಮೋದಿ ಅವರು ಸಿಎಂ ಬಿಎಸ್ವೈ ಅವರು ಚರ್ಚೆ ನಡೆಸಲಿದ್ದಾರೆ.
ರಾಜ್ಯದಲ್ಲಿ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಗಳನ್ನು ನೀಡಲಾಗುತ್ತಿದ್ದು, ಕೊರೊನಾ ಲಸಿಕೆ ನೀಡಿಕೆನ್ನು ಹೆಚ್ಚಳ ಮಾಡುವ ಬಗ್ಗೆ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಸೂಚಿಸುವ ಸಾಧ್ಯತೆ ಇದೆ.