ಕೋಲಾರ, ಏ 8 (DaijiworldNews/MS): ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೋಲಾರ ನಗರದ ಕುರುಬರ ಪೇಟೆ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು ಸದ್ಯ ಅವರನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮದುವೆ ವಿಚಾರವಾಗಿ ವಿವಾದದ ಹಿನ್ನೆಲೆ ಮನನೊಂದು ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಮಾರ್ಚ್-28 ರಂದು ಮಂಡ್ಯ ಮೂಲದ ಕನ್ಸ್ಟ್ರಕ್ಷನ್ ಮತ್ತು ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ನಾಗಾರ್ಜುನ್ ಎಂಬವರೊಂದಿಗೆ ಚೈತ್ರಾ ದೇವಸ್ಥಾನದಲ್ಲಿ ಸಿಂಪಲ್ ಆಗಿ ಮದುವೆಯಾಗಿದ್ದರು. ಆದರೆ ಮದುವೆಯಾದ ದಿನವೇ ವಿವಾದ ಎಬ್ಬಿದ್ದು, ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ವಿವಾಹವಾಗಿ ಕೆಲವೇ ಗಂಟೆಗಳು ಕಳೆಯುವುದರೊಳಗೆ ನಾಗಾರ್ಜುನ್ ಮನೆಯವರು ತಕರಾರು ತೆಗೆದಿದ್ದರು. ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ನಾಗಾರ್ಜುನ್ ನನಗೆ ಈ ವಿವಾಹ ಇಷ್ಟವಿಲ್ಲ ಎಂದು ಹೇಳಿದ್ದರು. ಆದರೆ ಚೈತ್ರಾ ಕೋಟೂರ್ ಮಾತ್ರ ನನಗೆ ನಾಗಾರ್ಜುನ್ ತುಂಬಾ ಇಷ್ಟ. ಅವರ ಜೊತೆಯೇ ಹೋಗುತ್ತೇನೆ ಎಂದು ಪಟ್ಟು ಹಿಡಿದ್ದರು.