ಕೋಲ್ಕತಾ, ಎ.08 (DaijiworldNews/PY): ಕೊರೊನಾ ಪರಿಸ್ಥಿತಿಯ ಬಗ್ಗೆ ಚರ್ಚಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ರಾಜ್ಯದ ಸಿಎಂಗಳೊಂದಿಗೆ ಕರೆದ ವಿಡಿಯೋ ಸೌಭೆಯಲ್ಲಿ ಪಶ್ಚಿಮಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಪಾಲ್ಗೊಳ್ಳುವುದಿಲ್ಲ ಎಂದು ಗುರುವಾರ ರಾಜ್ಯ ಸರ್ಕಾರದ ಮೂಲಗಳು ತಿಳಿಸಿವೆ.
ಸಿಎಂ ಮಮತಾ ಬ್ಯಾನರ್ಜಿ ಅವರು ಬದಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡ್ಯೋಪಾಧ್ಯಾಯ ಅವರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದೇಶದಲ್ಲಿ ಕೊರೊನಾದ ಎರಡನೇ ಅಲೆ ಹೆಚ್ಚಾಗುತ್ತಿದ್ದು, ಪರಿಸ್ಥತಿ ಬಗ್ಗೆ ಮಾಹಿತಿ ಪಡೆಯಲು ಎಲ್ಲಾ ರಾಜ್ಯಗಳ ಸಿಎಂಗಳೊಂದಿಗೆ ಸಭೆ ನಡೆಸಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದ್ದರು.
ರಾಜ್ಯದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಮಮತಾ ಬ್ಯಾನರ್ಜಿ ಅವರು ನಿರತರಾಗಿರುವ ಕಾರಣ ಪ್ರಧಾನಿ ಮೋದಿ ಅವರು ಕರೆದ ಸಭೆಯಲ್ಲಿ ಪಾಲ್ಗೊಳ್ಳುತ್ತಿಲ್ಲ ಎನ್ನಲಾಗಿದೆ.
ದೇಶದಲ್ಲಿ ಗುರುವಾರ 1.26 ಲಕ್ಷ ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದು ದೇಶದಲ್ಲಿ ಸೋಂಕು ಕಾಣಿಸಿಕೊಂಡ ಬಳಿಕ ದಾಖಲಾದ ಗರಿಷ್ಠ ಪ್ರಮಾಣವಾಗಿದೆ.