ಮುಂಬೈ, ಎ.08 (DaijiworldNews/PY): ಎರಡು ಪ್ರಕರಣದ ಆರೋಪಿಯಾಗಿರುವ ಅಮಾನತುಗೊಂಡಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರನ್ನು ಎನ್ಐಎ ಗುರುವಾರ ಇಲ್ಲಿನ ಸರ್ಕಾರಿ ಸ್ವಾಮ್ಯದ ಜೆಜೆ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ.
ಉದ್ಯಮಿ ಮುಖೇಶ್ ಅಂಬಾನಿ ನಿವಾಸದ ಬಳಿ ಸ್ಪೋಟಕಗಳನ್ನು ತುಂಬಿದ್ದ ವಾಹನ ಪತ್ತೆ ಪ್ರಕರಣ ಹಾಗೂ ಉದ್ಯಮಿ ಮನ್ಸುಖ್ ಹಿರೇನ್ ಸಾವಿನ ಪ್ರಕರಣಗಳಲ್ಲಿ ಆರೋಪಿಯಾಗಿರುವ, ಅಮಾನತುಗೊಂಡಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆ (49) ಅವರನ್ನು ಕಳೆದ ತಿಂಗಳು ಎನ್ಐಎ ಬಂಧಿಸಿತ್ತು.
ಸಚಿನ್ ವಾಜೆ ಅವರನ್ನು ಎನ್ಐಎ ಬಂಧಿಸಿದ ಬಳಿಕ ಎರಡನೇ ಬಾರಿಗೆ ವೈದ್ಯಕೀಯ ತಪಾಸಣೆ ಮಾಡಿದಂತಾಗಿದೆ.