ಮಂಡ್ಯ, ಏ. 08 (DaijiworldNews/HR): ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಬಳ್ಳೇಅತ್ತಿಗುಪ್ಪೆ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ಗುರುವಾರ ಸಂಭವಿಸಿದೆ.
ಸಾಂಧರ್ಭಿಕ ಚಿತ್ರ
ಮೃತಪಟ್ಟ ಮಕ್ಕಳನ್ನು ಚಂದನ್, ಕಾರ್ತಿಕ್ ಹಾಗೂ ರೀತೇಶ್ ಎಂದು ಗುರುತಿಸಲಾಗಿದೆ.
ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಮಕ್ಕಳು ಗ್ರಾಮದ ಹೊರವಲಯದಲ್ಲಿರುವ ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಇನ್ನು ಈ ಬಗ್ಗೆ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.