ಬೆಳಗಾವಿ, ಏ. 09 (DaijiworldNews/HR): ಬೆಳಗಾವಿ ಜಿಲ್ಲೆಯ ಸವದತ್ತಿ ಘಟಕದ ಬಸ್ ಚಾಲಕ ಕಂ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದ ಸಾರಿಗೆ ನೌಕರರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ನೌಕರನನ್ನು ಶಿವಕುಮಾರ್ ನೀಲಗಾರ (40) ಎಂದು ಗುರುತಿಸಲಾಗಿದೆ.
ಕರ್ತವ್ಯಕ್ಕೆ ಹಾಜರಾಗುವಂತೆ ಅಧಿಕಾರಿಗಳ ಕಿರುಕುಳಕ್ಕೆ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಸವದತ್ತಿಯಲ್ಲಿರುವ ತಮ್ಮ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇವರು ವಾಕರಾರಸಾ ಸಂಸ್ಥೆಯ ಧಾರವಾಡ ವಿಭಾಗದ ಸವದತ್ತಿ ಘಟಕದಲ್ಲಿ ಕಳೆದ 12 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821