ಬೆಂಗಳೂರು, ಎ.09 (DaijiworldNews/PY): ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಮುಂದುವರೆದಿದ್ದು, ಮೂರನೇ ದಿನಕ್ಕೆ ಕಾಲಿಟ್ಟಿದೆ.
ಸಾಂದರ್ಭಿಕ ಚಿತ್ರ
ರಾಜ್ಯ ಸರ್ಕಾರ ಸಾರಿಗೆ ನೌಕರರ ಈಡೇರಿಕೆ ಸಾಧ್ಯವಿಲ್ಲ ಎಂದರೆ, ಸಾರಿಗೆ ನೌಕರರು ತಮ್ಮ ಬೇಡಿಕೆ ಈಡೇರಿಸದಿದ್ದರೆ ಮುಷ್ಕರ ಕೈಬಿಡೋದಿಲ್ಲ ಎಂದು ಮುಷ್ಕರ ಮುಂದುವರೆಸಿದ್ದಾರೆ.
ಸಾರಿಗೆ ನೌಕರರು ರಾಜ್ಯ ಸರ್ಕಾರದ ವಿರುದ್ದ ಅನಿರ್ಧಿಷ್ಟಾವಧಿಯ ಮುಷ್ಕರ ಮುಂದುವರೆಸಿದ್ದಾರೆ. ಮುಷ್ಕರದ ಹಿನ್ನೆಲೆ ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಸಾರಿಗೆ ಬಸ್ಗಳಿಲ್ಲದೇ ಪ್ರಯಾಣಿಕರು ಪರದಾಡುವ ಸ್ಥಿತಿ ಉಂಟಾಗಿದೆ.
ರಾಜ್ಯ ಸರ್ಕಾರ ಸಾರಿಗೆ ನೌಕರರ ಬೇಡಿಕೆ ಈಡೇರಿಸುವ ಬದಲು ಪರ್ಯಾಯ ಸಾರಿಗೆ ವ್ಯವಸ್ಥೆ ಮಾಡಲು ಮುಂದಾಗಿದೆ. ಇದಕ್ಕಾಗಿ ಈಗಾಗಲೇ 2 ವರ್ಷಗಳ ಹಿಂದೆ ನಿವೃತ್ತರಾದ ಸಾರಿಗೆ ನೌಕರರನ್ನು ಪುನಃ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ.