ಕೋಲ್ಕತ್ತಾ, ಏ. 09 (DaijiworldNews/HR): ಪಶ್ಚಿಮ ಬಂಗಾಳದ ನಂದಿಗ್ರಾಮದ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿಗೆ ಚುನಾವಣಾ ಆಯೋಗ ನೋಟೀಸ್ ನೀಡಿದ್ದು, ನೋಟಿಸ್ಗೆ 24 ಗಂಟೆಗಳ ಒಳಗೆ ಉತ್ತರಿಸಬೇಕೆಂದು ಹೇಳಿದೆ ಎಂದು ತಿಳಿದು ಬಂದಿದೆ.
ಮಾರ್ಚ್ 29 ರಂದು ಸಾರ್ವಜನಿಕ ಸಭೆಯಲ್ಲಿ ಸುವೇಂದು ಅವರು "ದ್ವೇಷ ಭಾಷಣ" ಮಾಡಿದ್ದಾರೆ ಎಂದು ಚುನಾವಣಾ ಆಯೋಗಕ್ಕೆ ಸಿಪಿಐ-ಎಂಎಲ್ ಕೇಂದ್ರ ಸಮಿತಿಯ ಕವಿತಾ ಕೃಷ್ಣನ್ ಅವರಿಂದ ದೂರು ನೀಡಿದ್ದಾರೆ ಎನ್ನಲಾಗಿದೆ.
ಮಾದರಿ ನೀತಿ ಸಂಹಿತೆಯ ಕೆಲವು ಷರತ್ತುಗಳನ್ನು ಉಲ್ಲಂಘಿಸಿರುವುದು ಆಯೋಗದ ಗಮನಕ್ಕೆ ಬಂದಿರುವುದಾಗಿ ನೋಟೀಸ್ನಲ್ಲಿ ಹೇಳಲಾಗಿದೆ.
ಇನ್ನು ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ನಂದಿಗ್ರಾಮದಿಂದ ಸುವೇಂದು ಅಧಿಕಾರಿ ಸ್ಪರ್ಧಿಸುತ್ತಿದ್ದಾರೆ.