ಚಾಮರಾಜನಗರ, ಏ. 09 (DaijiworldNews/HR): ಯುಗಾದಿ ಹಬ್ಬಕ್ಕೆ ಹೊಸ ಬಟ್ಟೆ ಕೊಡಿಸಿಲ್ಲ ಎಂಬ ಕಾರಣಕ್ಕಾಗಿ ಬಾಲಕಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಳ್ಳೇಗಾಲ ಪಟ್ಟಣದಲ್ಲಿ ಶುಕ್ರವಾರ ಜರುಗಿದೆ.
ಸಾಂಧರ್ಭಿಕ ಚಿತ್ರ
ಆತ್ಮಹತ್ಯೆಗೆ ಶರಣಾದ ಬಾಲಕಿಯನ್ನು ಹರ್ಷಿತಾ(12) ಎಂದು ಗುರುತಿಸಲಾಗಿದೆ.
ಹರ್ಷಿತಾ ಹಬ್ಬಕ್ಕೆ ಹೊಸ ಬಟ್ಟೆ ತೆಗೆದುಕೊಡಿ ಎಂದು ಕೇಳಿದಾಗ ಆಕೆಯ ಪೋಷಕರ ಸಂಬಳವಾದ ಬಳಿಕ ಎಲ್ಲರೂ ಸೇರಿ ಬಟ್ಟೆ ತೆಗೆದುಕೊಳ್ಳೋಣ ಎಂದು ಹೇಳಿದ್ದಾರೆ, ಅಷ್ಟಕ್ಕೇ ಬೇಸರದಿಂದ ಯಾರು ಇಲ್ಲದ ಸಮಯದಲ್ಲಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಸ್ಥಳಕ್ಕೆ ಪರೀಶಿಲಿಸಿ ಬಳಿಕ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ವಾರಸುದಾರರಿಗೆ ಒಪ್ಪಿಸಿದ್ದಾರೆ ಎಂದು ವರದಿಯಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821