ಬೆಂಗಳೂರು, ಏ. 09 (DaijiworldNews/HR): ಕರ್ನಾಟಕದಲ್ಲಿ ಅತೀ ಶೀಘ್ರದಲ್ಲಿ ಹೆಲಿಟೂರಿಸಂ ಆರಂಭಿಸುವುದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಹೆಲಿಟೂರಿಸಂ ಕಂಪನಿಗಳಿಗೆ ಸೂಚಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಮೊದಲಿಗೆ ಕರ್ನಾಟಕದಲ್ಲಿ ಬಳಕೆಯಲ್ಲಿರುವ ಹೆಲಿಪ್ಯಾಡ್ ಹಾಗೂ ವಿಮಾನ ನಿಲ್ದಾಣಗಳನ್ನು ಬಳಸಿಕೊಂಡು ಹೆಲಿಟೂರಿಸಂ ಆರಂಭಿಸುವಂತೆ ಹಾಗೂ ಹೆಲಿಪ್ಯಾಡ್ಗಳಲ್ಲಿ ಪ್ರಯಾಣಿಕರ ಅನುಕೂಲಕ್ಕೆ ಲಾಂಜ್ಗಳನ್ನು ಸರ್ಕಾರವೇ ನಿರ್ಮಿಸಿಕೊಡಲಿದೆ" ಎಂದರು.
ಇನ್ನು "ಪ್ರಥಮ ಹಂತದಲ್ಲಿ ಬೆಂಗಳೂರು, ಮೈಸೂರು, ಮಂಗಳೂರು, ಬಳ್ಳಾರಿ, ಹುಬ್ಬಳ್ಳಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಹೆಲಿಟೂರಿಸಂ ಆರಂಭಿಸುವಂತೆ ಸಚಿವರು ನಿರ್ದೇಶಿಸಿದ್ದು, ಇದಕ್ಕೆ ಸ್ಪಂದಿಸಿದ ಹೆಲಿಟೂರಿಸಂ ಕಂಪನಿಗಳು ರಾಜ್ಯ ಸರ್ಕಾರವು ಪ್ರವಾಸಿ ಮಾರ್ಗಗಳನ್ನು ನಿಗದಿಪಡಿಸಿದ ತಕ್ಷಣ ಪ್ರವಾಸಿಗರಿಗೆ ಸೇವೆ ಒದಗಿಸಲು ಸಿದ್ಧವಿದೆ" ಎಂದು ತಿಳಿಸಿದರು.
ಕರ್ನಾಟಕದಲ್ಲಿರುವ ಎಲ್ಲಾ ವಿಮಾನ ನಿಲ್ದಾಣಗಳು ಹಾಗೂ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಪ್ರವಾಸಿಗರಿಗೆ ಕಾರವಾನ್ ಸೌಲಭ್ಯವನ್ನು ಒದಗಿಸಲು ಸಹ ಸಭೆಯಲ್ಲಿ ನಿರ್ಧರಿಸಲಾಗಿದೆ.