ಬೆಂಗಳೂರು, ಎ.09 (DaijiworldNews/PY): ಕೊರೊನಾ ಪ್ರಕರಣಗಳ ಹೆಚ್ಚುತ್ತಿರುವ ಹಿನ್ನೆಲೆ ಗುರುವಾರ ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿದ ರಾಜ್ಯ ಸರ್ಕಾರ ಇದೀಗ ಕೊರೊನಾ ಕರ್ಫ್ಯೂ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಸಾಂದರ್ಭಿಕ ಚಿತ್ರ
ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸುವ ಕಂಪೆನಿಗಳು ನೈಟ್ ಕರ್ಫ್ಯೂ ಸಮಯದಲ್ಲಿ ಯಥಾಸ್ಥಿತಿಯಂತೆ ಕಾರ್ಯ ನಿರ್ವಹಿಸಬಹುದು. ಆದರೆ, ನೌಕರರು ಕೊರೊನ ಕರ್ಫ್ಯೂ ಅವಧಿಗೆ ಮುನ್ನವೇ ಕರ್ತವ್ಯದಲ್ಲಿ ಹಾಜರಿರಬೇಕು ಎಂದು ತಿಳಿಸಿದೆ.
ವಿವಿಧ ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಹಾಗೂ ಅವರ ಸಹಾಯಕರಿಗೆ ವೈದ್ಯಕೀಯ ಸಂಚಾರಕ್ಕೆ ಅವಕಾಶವಿದೆ. ವೈದ್ಯಕೀಯ ಸೇವೆಗಳನ್ನು ಹಾಗೂ ತುರ್ತು ಚಟುವಟಿಕೆ ಮಾತ್ರ ಅವಕಾಶ. ಇನ್ನುಳಿದಂತೆ ಎಲ್ಲಾ ವಾಣಿಜ್ಯ ಸೇವೆಗಳನ್ನು ನಿರ್ಬಂಧಿಸಲಾಗಿದೆ. ಅತ್ಯವಶ್ಯಕ ಸೇವೆಗಳನ್ನು ಒದಗಿಸುವ ವಾಹನಗಳು, ಹೋಮ್ ಡೆಲಿವರಿ, ಇ ಕಾಮರ್ಸ್ ಹಾಗೂ ಖಾಲಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ಹೇಳಿದೆ.
ರಾತ್ರಿ ವೇಳೆಯಲ್ಲಿನ ಬಸ್ಸು, ರೈಲು ಹಾಗೂ ವಿಮಾನ ದೂರ ಪ್ರಯಾಣಕ್ಕೆ ಅನುಮತಿ ನೀಡಿದ್ದು, ಪ್ರಯಾಣಿಕರು ಮನೆಯಿಂದಲೇ ನಿಲ್ದಾಣಗಳಿಗೆ ಹಾಗೂ ನಿಲ್ದಾಣಗಳಿಂದ ಮನೆಗೆ ಅಧಿಕೃತ ಟಿಕೆಟ್ಗಳ ಆಧಾರದ ಮೇಲೆ ಆಟೋ ಅಥವಾ ಕ್ಯಾಬ್ ಇತ್ಯಾದಿಗಳ ಮೂಲಕ ಸಂಚರಿಸಬಹುದು ಎಂದು ಸರ್ಕಾರ ತಿಳಿಸಿದೆ.