ಬೆಂಗಳೂರು, ಏ. 09 (DaijiworldNews/HR): ಜಿ.ಪಂ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಆರೋಪದಡಿ ಬಂಧಿತರಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ.
ವಿನಯ್ ಕುಲಕರ್ಣಿ ಜಾಮೀನು ಅರ್ಜಿಯನ್ನು ಬೆಂಗಳೂರಿನ ಹೈಕೋರ್ಟ್ ಮತ್ತೆ ಮುಂದೂಡಿದ್ದು, ಇಂದು ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ಜಾಮೀನು ಅರ್ಜಿಯನ್ನು ಏಪ್ರಿಲ್ 15 ಕ್ಕೆ ಮುಂದೂಡಿದೆ.
ಜಾಮೀನು ಅರ್ಜಿಯನ್ನು ಏಪ್ರಿಲ್ 15 ಕ್ಕೆ ಮುಂದೂಡಿದ್ದು, ಈ ಮೂಲಕ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ವಿನಯ ಕುಲಕರ್ಣಿಗೆ ಮತ್ತೆ ನಿರಾಶೆಯಾಗಿದೆ ಎನ್ನಲಾಗಿದೆ.