ಬೆಂಗಳೂರು, ಎ.10 (DaijiworldNews/MB) : ನಾಳೆ ನಡೆಯಲಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಎಸ್ಇಟಿ) ಮುಂದೂಡಿಕೆ ಮಾಡಲಾಗಿದೆ ಎಂದು ಕೆಎಸ್ಇಟಿ ಅಧಿಕೃತ ವೆವ್ಸೈಟ್ನಲ್ಲಿ ಪ್ರಕಟಿಸಲಾಗಿದೆ.
ಸಾರಿಗೆ ನೌಕರರ ಮುಷ್ಕರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆಎಸ್ಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ.
ಮುಷ್ಕರದ ಹಿನ್ನೆಲೆಯಲ್ಲಿ ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಲು ತೊಂದರೆ ಉಂಟಾಗುವ ಕಾರಣ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ವರದಿಯಾಗಿದೆ.
''ಎಪ್ರಿಲ್ 11 ರಂದು ನಿಗದಿ ಮಾಡಲಾಗಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. ಪರೀಕ್ಷೆಯ ಹೊಸ ದಿನಾಂಕವನ್ನು ಪ್ರಕಟಿಸಲಾಗುವುದು'' ಎಂದು ಕೆಎಸ್ಇಟಿ ತಿಳಿಸಿದೆ.