ಪಶ್ಚಿಮ ಬಂಗಾಳ, ಏ.10 (DaijiworldNews/HR): ಮತದಾನದ ವೇಳೆ ಸ್ಥಳೀಯರು ತಮ್ಮ ವಿರುದ್ಧ ದಾಳಿ ನಡೆಸಿ, ಬಂದೂಕುಗಳನ್ನು ಕಸಿದುಕೊಳ್ಳಲು ಮುಂದಾದ ವೇಳೆ ಸಿಐಎಸ್ಎಫ್ನವರು ಗುಂಡು ಹಾರಿಸಿದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದ ಕೂಚ್ಬಿಹಾರ್ ಜಿಲ್ಲೆಯ ಸಿತಾಲ್ಕುಚಿ ಗ್ರಾಮದಲ್ಲಿ ನಡೆದಿದೆ.
ಸಾಂಧರ್ಭಿಕ ಚಿತ್ರ
ಬಂಗಾಳದಲ್ಲಿ ಚುನಾವಣೆಯ ನಾಲ್ಕನೇ ಹಂತದ ಮತದಾನ ನಡೆಯುತ್ತಿದ್ದು, ಸಿತಾಲ್ಕುಚಿ ಪ್ರದೇಶದಲ್ಲಿ ಮತದಾನದ ವೇಳೆ ಗಲಾಟೆ ನಡೆದಿದ್ದು, ಈ ವೇಳೆ ಸ್ಥಳೀಯರು ಸಿಐಎಸ್ಎಫ್ ಸಿಬ್ಬಂದಿಗೆ ಘೇರಾವ್ ಹಾಕಿ, ಬಂದೂಕುಗಳನ್ನು ಕಿತ್ತುಕೊಳ್ಳಲು ಪ್ರಯತ್ನಿಸಿದರು. ಆಗ ಕೇಂದ್ರೀಯ ಪಡೆಗಳು ಗುಂಡು ಹಾರಿಸಿದವು. ಪ್ರಾಥಮಿಕ ವರದಿಗಳ ಪ್ರಕಾರ, ಸಿಐಎಸ್ಎಫ್ ನಡೆಸಿದ ಗುಂಡಿನ ದಾಳಿಯಿಂದ ನಾಲ್ವರು ಸಾವನ್ನಪ್ಪಿದ್ದಾರೆ' ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇನ್ನು ಈ ಘಟನೆ ಕುರಿತು ಚುನಾವಣಾ ಅಧಿಕಾರಿಗಳಿಗೆ ವರದಿ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.