ಬೆಳಗಾವಿ, ಏ.10 (DaijiworldNews/HR): "ಕೊರೊನಾ ಹಗಲು ಹರಡುವುದಿಲ್ಲ, ರಾತ್ರಿ ಮಾತ್ರ ಹರಡುತ್ತದೆ ಎಂದು ಹೇಳಿರುವ ವಿಜ್ಞಾನಿ ಯಾರೆಂದರು ಹೇಳಿದರೆ ಅವರ ಫೋಟೊವನ್ನು ನಾವೂ ಇಟ್ಟುಕೊಳ್ಳುತ್ತೇವೆ" ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾತ್ರಿ ಕರ್ಫ್ಯೂ ಮಾಡಿ ಆರ್ಥಿಕತೆ ಹಾಳು ಮಾಡುತ್ತಿದ್ದು, ರಾತ್ರಿ ಕರ್ಫ್ಯೂ ಇಂದ ಜನರನ್ನು ಮಾನಸಿಕವಾಗಿ ಕುಂದಿಸುತ್ತಿದ್ದಾರೆ. ಹಗಲಲ್ಲಿ ಕೊರೊನಾ ಹರಡುವುದಿಲ್ಲವೇ? ಇವೆಲ್ಲ ಸರ್ಕಾರದ ಅವೈಜ್ಞಾನಿಕ ನಿರ್ಧಾರಗಳು" ಎಂದರು.
ಇನ್ನು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸಾರಿಗೆ ಮಂತ್ರಿ ಆದಾಗಿನಿಂದ ಕೈಗೊಂಡ ನಿರ್ಧಾರಗಳೆಲ್ಲವೂ ತಪ್ಪಾಗಿದ್ದು, ನೌಕರರು ಸರ್ಕಾರದ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಮೊದಲು ಆ ನೌಕರರಿಗೆ ಸಂಬಳ ಕೊಡುವುದಕ್ಕೆ ಹೇಳಿ" ಎಂದಿದ್ದಾರೆ.
"ಸತೀಶ್ ಜಾರಕಿಹೊಳಿ ದೊಡ್ಡ ನಾಯಕ, ಅವರು ಮೌಢ್ಯಗಳ ವಿರುದ್ಧ ಹೋರಾಡುತ್ತಿದ್ದು, ಒಬ್ಬೊಬ್ಬರಿಗೆ ಒಂದೊಂದು ನಂಬಿಕೆ ಇರುತ್ತದೆ" ಎಂದು ಹೇಳಿದ್ದಾರೆ.