ಚೆನ್ನೈ, ಏ.11 (DaijiworldNews/HR): ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಿರುವ ಅಣ್ಣಾಮಲೈ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಅವರು, "ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದೇನೆ. ಕಳೆದ ಕೆಲ ದಿನಗಳಿಂದ ನನ್ನ ಜೊತೆ ಇದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ" ಎಂದು ಮನವಿ ಮಾಡಿದ್ದಾರೆ.
ಇನ್ನು ಅಣ್ಣಾಮಲೈ ಅವರು ತಮಿಳುನಾಡು ಬಿಜೆಪಿ ಉಪಾಧ್ಯಕ್ಷರಾಗಿದ್ದು, ಅರಾವಕುರಿಚಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ನಡೆಸುತ್ತಿದ್ದಾರೆ.