ಲಕ್ನೋ, ಏ.11 (DaijiworldNews/MB) : ಕೊರೊನಾ ಪ್ರಕರಣಗಳು ಅಧಿಕವಾಗುತ್ತಿರುವ ನಿಟ್ಟಿನಲ್ಲಿ ಧಾರ್ಮಿಕ ಕ್ಷೇತ್ರಗಳಿಗೆ ಐದಕ್ಕಿಂತ ಹೆಚ್ಚು ಜನರು ಜೊತೆಯಾಗಿ ಪ್ರವೇಶ ಮಾಡಲು ಅವಕಾಶವಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕೊರೊನಾ ಹರಡುವುದನ್ನು ತಡೆಯಲು ನಾವು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗಿದೆ. ಎಲ್ಲಾ ಜಿಲ್ಲೆಗಳಲ್ಲಿ ಏಕೀಕೃತ ಆದೇಶ ಮತ್ತು ನಿಯಂತ್ರಣ ವ್ಯವಸ್ಥೆಯನ್ನು ಒಳಗೊಂಡ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ ಎಂದು ಹೇಳಿದರು.
ಕಂಟೈನ್ಮೆಂಟ್ ವಲಯಗಳಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದ್ದು ಇಲ್ಲಿ ನಾಗರಿಕರಿಗೆ ಅಗತ್ಯ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಮಾಡಬೇಕು ಎಂದೂ ಅಧಿಕಾರಿಗಳಿಗೆ ಸೂಚಿಸಿದರು.