ಬೆಳಗಾವಿ, ಏ.11 (DaijiworldNews/HR): "ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯುರಪ್ಪ ಅವರಿಗೆ ಸರ್ಕಾರವನ್ನು ಯಾವ ರೀತಿ ನಡೆಸಬೇಕೆಂಬುದು ತಿಳಿದಿಲ್ಲ" ಎಂದು ಕಾಂಗ್ರೆಸ್ ವ್ಯವಹಾರಗಳ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು. "ಯಡಿಯೂರಪ್ಪ ನೇತೃತ್ವದ ಸರ್ಕಾರವು ಭ್ರಷ್ಟ ಸರ್ಕಾರಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇದು ಪ್ರಜಾಪ್ರಭುತ್ವದ ಹತ್ಯೆಯನ್ನು ಮಾಡುತ್ತಿದ್ದು, ರಾಜ್ಯದ ಪ್ರಗತಿಯ ಬಗ್ಗೆ ಗಮನ ಹರಿಸುತ್ತಿಲ್ಲ. ಜಿಎಸ್ಟಿ ಬಗ್ಗೆ ನಮಗೆ ತಿಳಿದಿದೆ ಆದರೆ ಕರ್ನಾಟಕದಲ್ಲಿ ಬಿ.ವೈ.ವಿಜಯೇಂದ್ರ ಅವರಿಗೆ ಕೂಡ ಹೊಸ ತೆರಿಗೆಯನ್ನು ಜನರು ಪಾವತಿಸಬೇಕಾಗುತ್ತದೆ "ಎಂದರು.
"ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮ ಸ್ಥಿತಿಯಲ್ಲಿತ್ತು. ಆದರೆ ಬಿಜೆಪಿ ಸರ್ಕಾರದಲ್ಲಿರುವ ಗೃಹ ಸಚಿವರು ಉನ್ನತ ಮಟ್ಟದ ಅಧಿಕಾರಿಗಳನ್ನು ನಿಯಂತ್ರಣದಲ್ಲಿಡಲು ವಿಫಲರಾಗಿದ್ದಾರೆ" ಎಂದು ಅವರು ಆರೋಪಿಸಿದರು.
ಇನ್ನು ಸಾರಿಗೆ ನೌಕರರ ವಿಷಯದಲ್ಲಿ ಆರನೇ ವೇತನ ಆಯೋಗದ ವರದಿಯನ್ನು ಏಕೆ ಜಾರಿಗೆ ತರುತ್ತಿಲ್ಲ? ಎಂದು ಪ್ರಶ್ನಿಸಿರುವ ಅವರು, " ತನ್ನ ಕುಟುಂಬಕ್ಕೆ ಪ್ರವಾಹ ಪರಿಹಾರ ಮೊತ್ತವನ್ನು ವಿತರಿಸದ ಕಾರಣ ತನ್ನ ಮನೆಯ ಮುಂದೆ ಮಹಿಳೆಯೊಬ್ಬರು ವಿಷ ಸೇವಿಸಿ ಮೃತಪಟ್ಟಿರುವುದಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಾಚಿಕೆಪಡಬೇಕು." ಈ ಆತ್ಮಹತ್ಯೆಯ ನಂತರವೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ" ಎಂದಿದ್ದಾರೆ.
ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಮತ್ತು ಇತರ ಅಗತ್ಯ ವಸ್ತುಗಳ ಬೆಲೆಯಲ್ಲಿ ಅನಿಯಂತ್ರಿತ ಹೆಚ್ಚಳ ಮತ್ತು ಕೇಂದ್ರ, ರಾಜ್ಯ ಸರ್ಕಾರಗಳ ಭ್ರಷ್ಟಾಚಾರಕ್ಕೆ ಬಿಜೆಪಿ ಆಡಳಿತ ಮಂಡಳಿಗೆ ಸೂಕ್ತ ಉತ್ತರ ನೀಡುವಂತೆ ಸುರ್ಜೆವಾಲಾ ಜನರಲ್ಲಿ ಕೇಳಿಕೊಂಡಿದ್ದಾರೆ.