ರಾಯಚೂರು, ಎ.11 (DaijiworldNews/PY): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಷ್ಕರ ನಿರತ ಸಾರಿಗೆ ನೌಕರರಿಗೆ ಶಾಕ್ ನೀಡಿದ್ದು, "ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗದೇ ಇದ್ದಲ್ಲಿ ವೇತನ ಕಡಿತ ಮಾಡುವುದಲ್ಲದೇ ಶಿಸ್ತು ಕ್ರಮ ಕೈಗೊಳ್ಳಲಾಗುವುದು" ಎಚ್ಚರಿಕೆ ನೀಡಿದ್ದಾರೆ.
ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಾರಿಗೆ ನೌಕರರ ಮುಷ್ಕರ ವಿಚಾರಕ್ಕೆ ಸಂಬಂಧಿಸಿದಂತೆ ಯಾರನ್ನೂ ಕೂಡಾ ಮಾತುಕತೆಗೆ ಕರೆಯುವುದಿಲ್ಲ. ನೌಕರರು ಕರ್ತವ್ಯಕ್ಕೆ ಹಾಗಜರಾಗಬೇಕು. ಬಸ್ಗಳನ್ನು ಓಡಿಸದೇ ಇದ್ದಲ್ಲಿ ಮುಂದೆ ಆಗುವ ಅನಾಹುತಗಳಿಗೆ ಅವರೇ ಹೊಣೆ" ಎಂದಿದ್ದಾರೆ.
"ಪ್ರಧಾನಿ ನರೇಂದ್ರ ಮೋದಿ ಅವರು ಸಿಎಂ ಬಿಎಸ್ವೈ ಅವರಿಗೆ ಕರೆ ಮಾಡಿದ್ದು, ರಾಜ್ಯದಲ್ಲಿ ಕೊರೊನಾ ವೈರಸ್ ವಿಚಾರದ ಬಗ್ಗೆ ಚರ್ಚೆ ನಡೆಸಿದ್ದು, ಹಲವು ಸಲಹೆಗಳನ್ನು ನೀಡಿದ್ದಾರೆ" ಎಂದು ಹೇಳಿದ್ದಾರೆ.