ಬಸವಕಲ್ಯಾಣ, ಏ.11 (DaijiworldNews/HR): "ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವ ಈಶ್ವರಪ್ಪ ಅವರ ನಡುವೆ ಮತಭೇದ ಇರಬಹುದು, ಆದರೆ, ಮನಭೇದ ಇಲ್ಲ" ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ಅರುಣ ಸಿಂಗ್ ಹೇಳಿದ್ದಾರೆ.
ಈ ಕುರಿತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಯುಕ್ತ ಪ್ರಚಾರ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಪ್ರಜಾಪ್ರಭುತ್ವದಲ್ಲಿ ಮತಭೇದ ಇರುವುದು ಸಹಜ. ಅವರಿಬ್ಬರೂ ಒಂದೇ ತಟ್ಟೆಯಲ್ಲಿ ಊಟ ಮಾಡುವವರು ಹಾಗಾಗಿ ಈ ಸಿಟ್ಟು ಸ್ವಲ್ಪ ಹೊತ್ತಿಗೆ ಅಷ್ಟೆ ಸರ್ಕಾರಕ್ಕೇನೂ ತೊಂದರೆ ಇಲ್ಲ" ಎಂದರು.
ಇನ್ನು "ಬಸವಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅನುದಾನ ನೀಡಿದ್ದು, ಮರಾಠಾ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದಾರೆ ಹೀಗಾಗಿ ಅಭ್ಯರ್ಥಿ ಶರಣು ಸಲಗರ ಗೆಲುವು ನಿಶ್ಚಿತವಾಗಿದೆ" ಎಂದು ಹೇಳಿದ್ದಾರೆ.