ಮಸ್ಕಿ, ಏ.11 (DaijiworldNews/HR): ಮಸ್ಕಿ ಉಪಚುನಾವಣೆಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಂದೇಶವೊಂದನ್ನು ಕಳುಹಿಸಿರುವ ಅವರು, "ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಪ್ರತ್ಯೇಕವಾಗಿ ಇದ್ದೇನೆ. ಯಾರೂ ಆತಂಕ ಪಡಬೇಕಾಗಿಲ್ಲ, ಶೀಘ್ರ ಗುಣಮುಖನಾಗಿ ಬರುತ್ತೇನೆ" ಎಂದಿದ್ದಾರೆ.
ಇನ್ನು "ಏಪ್ರಿಲ್ 17 ರಂದು ಮತದಾನ ಇದ್ದು ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ತಮ್ಮನ್ನು ಭೇಟಿ ಮಾಡುತ್ತಾರೆ. ಅವರನ್ನು ನಾನೇ ಎಂದು ಪರಿಭಾವಿಸಿ ಆಶೀರ್ವದಿಸಲು ಮತ್ತು ಕಮಲದ ಗುರುತಿಗೆ ಮತ ನೀಡಲು ಕೋರುತ್ತೇನೆ. ನಿಮ್ಮ ಮತ್ತು ನಿಮ್ಮ ಕುಟುಂಬದವರ ಆರೋಗ್ಯದ ಬಗ್ಗೆ ಎಚ್ಚರಿಕೆ ತೆಗೆದುಕೊಳ್ಳಲು ವಿನಂತಿಸುತ್ತೇನೆ" ಎಂದು ಮನವಿ ಮಾಡಿಕೊಂಡಿದ್ದಾರೆ.