ನವದೆಹಲಿ, ಏ.12 (DaijiworldNews/HR): ಭಾರತದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸುಪ್ರೀಂ ಕೋರ್ಟ್ನ ಶೇ.50ರಷ್ಟು ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಸಾಂಧರ್ಭಿಕ ಚಿತ್ರ
ಸುಪ್ರೀಂ ಕೋರ್ಟ್ ನ ದೈಹಿಕ ವಿಚಾರಣೆ ಕ್ರಮವನ್ನು ಸ್ಥಗಿತಗೊಳಿಸಿ, ನ್ಯಾಯಾಧೀಶರು, ಮನೆಯಿಂದಲೇ ಕೆಲಸ ಕಾರ್ಯ ನಿರ್ವಹಿಸಲಿದ್ದಾರೆ ಎನ್ನಲಾಗುತ್ತಿದ್ದು, ಇಂದು ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರು, ಸಿಬ್ಬಂದಿಗಳೊಂದಿಗೆ ವೀಡಿಯೋ ಕಾನ್ಫೆರನ್ಸ್ ಮೂಲಕ ಮಾಹಿತಿ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇನ್ನು ಸುಪ್ರೀಂ ಕೋರ್ಟ್ನ ಶೇ.50ರಷ್ಟು ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ನ್ಯಾಯಾಲಯಗಳು ಸೇರಿದಂತೆ ಇಡೀ ನ್ಯಾಯಾಲಯದ ಆವರಣವನ್ನು ಈಗ ಸ್ಯಾನಿಟೈಸ್ ಮಾಡಲಾಗುತ್ತಿದೆ. ಇಂದು ಈ ಕುರಿತಂತೆ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳು ಮಾಹಿತಿಯನ್ನು ಪಡೆಯಲಿದ್ದು, ಮುಂದಿನ ಕ್ರಮದ ಬಗ್ಗೆ ಚರ್ಚೆ ಕೂಡ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.