ಬೆಂಗಳೂರು, ಏ.12 (DaijiworldNews/HR): ಸಾರಿಗೆ ನೌಕರರು ತಮ್ಮ ಬೇಡಿಕೆ ಈಡೇರಿಸುವಂತ ಆಗ್ರಹಿಸಿ ನಡೆಸುತ್ತಿರುವ ಮುಷ್ಕರ 6ನೇ ದಿನಕ್ಕೆ ಕಾಲಿಟ್ಟಿದ್ದು, ರಾಜ್ಯ ಸರ್ಕಾರ ನೀಡಿರುವಂತ ಭರವಸೆಗಳ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟವು, "ಸಾರಿಗೆ ನೌಕರರಿಗೆ 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ನಿಗದಿ ಮಾಡುವುದು ಮತ್ತು ಇತರೆ ಮುಖ್ಯ 8 ಬೇಡಿಕೆಗಳನ್ನು ಈಡೇರಿಸುವ ಲಿಖಿತ ಭರವಸೆ ಈಡೇರಿಕೆಗೆ ಮೂರು ತಿಂಗಳು ಕಾಲಾವಕಾಶ ತೆಗೆದುಕೊಂಡ ಬಳಿಕ ಮುಷ್ಕರ ಅಂತ್ಯಗೊಂಡಿತ್ತು. 3 ತಿಂಗಳು ಕಳೆದರು ಭರವೆಸಗಳನ್ನು ಅಪೂರ್ಣವಾಗಿ ನೌಕರರಿಗೆ ಅನುಕೂಲವಾಗದ ರೀತಿಯಲ್ಲಿ ಹಳೆಯ ಸುತ್ತೋಲೆಗಳನ್ನು ಸ್ವಲ್ಪ ಬದಲಾವಣೆ ಮಾಡಿ, ಈಡೇರಿಸಿದ್ದೇವೆ ಎಂದು ಬಿಂಬಿಸುತ್ತಿದ್ದು, ಬಹು ಮುಖ್ಯ ಬೇಡಿಕೆಯಾದ 6ನೇ ವೇತನ ಆಯೋಗದ ಶಿಫಾರಸ್ಸನ್ನು ಸಾರಿಗೆ ನೌಕರರಿಗೆ ನೀಡುವ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ" ಎಂದು ಹೇಳಿದೆ.
ಇನ್ನು ಈ ಕೂಡಲೇ ಸಾರಿಗೆ ನೌಕರರಿಗೆ 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ಯಥಾಸ್ಥಿತಿ ವೇತನ ನೀಡುವುದು ಹಾಗೂ ನೌಕರರಿಗೆ ಅನುಕೂಲವಲ್ಲದ 8 ಭರವಸೆಗಳನ್ನು ನೌಕರರಿಗೆ ಅನುಕೂಲವಾಗುವ ರೀತಿಯಲ್ಲಿ ದೋಷಗಳನ್ನು ಸರಿಪಡಿಸಿ ಎಂದು ಪತ್ರದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.