ನವದೆಹಲಿ, ಏ.12 (DaijiworldNews/MB) : ದೆಹಲಿಯ ಮಾರುಕಟ್ಟೆಯೊಂದರಲ್ಲಿ ವ್ಯಕ್ತಿಯೊಬ್ಬ ತನ್ನ 26 ವರ್ಷದ ಪತ್ನಿಗೆ 25 ಬಾರಿ ಇರಿದು ಕೊಂದ ಘಟನೆ ಏಪ್ರಿಲ್ 10 ರ ಶನಿವಾರ ಮಧ್ಯಾಹ್ನ ನಡೆದಿದೆ.
ಬುಧ್ ವಿಹಾರದಲ್ಲಿ ಹರೀಶ್ ಎಂಬಾತ ತನ್ನ ಪತ್ನಿಗೆ ಸಾರ್ವಜನಿಕವಾಗಿ ಇರಿದು ಹತ್ಯೆಗೈದಿದ್ದಾರೆ. ತನ್ನ ಪತ್ನಿಗೆ ಅಕ್ರಮ ಸಂಬಂಧವಿದೆ ಎಂಬ ಅನುಮಾನದ ಮೇಲೆ ಆತ ಈ ಕೃತ್ಯ ಎಸಗಿದ್ದಾನೆ. ಈ ಕೃತ್ಯವೂ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಇನ್ನು ಕೆಲವು ಜನರು ಮಧ್ಯಪ್ರವೇಶಿಸಿ ಮಹಿಳೆಯನ್ನು ಉಳಿಸಲು ಪ್ರಯತ್ನಿಸಿದಾಗ, "ಮುಂದೆ ಬರಲು ಧೈರ್ಯ ಮಾಡಬೇಡಿ" ಎಂದು ಹರೀಶ್ ಕಿರುಚಿದ್ದಾನೆ. ಈ ವಿಡಿಯೋದಲ್ಲಿ ಇಬ್ಬರು ಪುರುಷರು ಆಕಸ್ಮಿಕವಾಗಿ ಸ್ಥಳದಲ್ಲಿ ನಡೆದುಕೊಂಡು ಹೋಗುವುದು ಕೂಡಾ ವಿಡಿಯೋದಲ್ಲಿ ಕಾಣಬಹುದಾಗಿದೆ.
ಇನ್ನು ಆರೋಪಿಯನ್ನು ಈಗಾಗಲೇ ಬಂಧನ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.