ಬೆಂಗಳೂರು, ಏ.13 (DaijiworldNews/HR): ಕರ್ನಾಟದಲ್ಲಿ ಇಂದು ಚಾಂದ್ರಮಾನ ಯುಗಾದಿ ಆಚರಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಜನತೆಗೆ ಯುಗಾದಿಯ ಶುಭಾಶಯ ಕೋರಿದ್ದಾರೆ.
ಈ ಕುರಿತು ಕನ್ನಡಲ್ಲೇ ಶುಭಾಶಯ ಕೋರಿ ಟ್ವೀಟ್ ಮಾಡಿರುವ ಅವರು, "ನಿಮ್ಮೆಲ್ಲರಿಗೂ ಯುಗಾದಿಯ ಶುಭಕಾಮನೆಗಳು. ಮುಂಬರುವ ವರ್ಷ ಅದ್ಭುತವಾಗಲಿ. ನೀವೆಲ್ಲರೂ ಆರೋಗ್ಯ ಹಾಗೂ ಸಂತಸದಿಂದಿರಿ. ಎಲ್ಲೆಡೆ ಸಮೃದ್ಧಿ ಹಾಗು ಸಂತೋಷ ಪಸರಿಸಲಿ" ಎಂದು ಬರೆದುಕೊಂಡಿದ್ದಾರೆ.
ಇನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ, "ನಾಡಿನ ಸಮಸ್ತ ಜನತೆಗೆ ಯುಗಾದಿಯ ಹಾರ್ದಿಕ ಶುಭಾಶಯಗಳು. ನೂತನ ಪ್ಲವ ಸಂವತ್ಸರವು ಎಲ್ಲರ ಬಾಳಿನಲ್ಲಿ ಆರೋಗ್ಯ, ಸುಖ, ಸಮೃದ್ಧಿ, ಯಶಸ್ಸನ್ನು ಹೊತ್ತು ತರಲಿ, ಸಾಂಕ್ರಾಮಿಕ ರೋಗದ ಪಿಡುಗು ನಾಡಿನಿಂದ ತೊಲಗಲಿ. ನಾವೂ ಸುರಕ್ಷಿತರಾಗಿದ್ದು, ಇತರರೂ ಸುರಕ್ಷಿತರಾಗಿರುವಂತೆ, ಎಲ್ಲಾ ಮುನ್ನೆಚ್ಚರಿಕೆ ವಹಿಸಿ ಹಬ್ಬ ಆಚರಿಸೋಣ" ಎಂದು ಹೇಳಿದ್ದಾರೆ.