ಬೆಂಗಳೂರು, ಎ.13 (DaijiworldNews/PY): "ರಾಜ್ಯದ ಮೂರೂ ಸ್ಥಾನಗಳು ಬಿಜೆಪಿ ಪಾಲಾಗಲಿವೆ. ಈ ಮೂಲಕ ಸಿದ್ದರಾಮಯ್ಯ ಅವರು ಅಡ್ರಸ್ ಇಲ್ಲದ ನಾಯಕರಾಗಲಿದ್ದಾರೆ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, "ಕಾಂಗ್ರೆಸ್ ಪಕ್ಷ ಅಧಿಕಾರ ಇಲ್ಲದಿದ್ದಾಗ ಕುತಂತ್ರ, ಷಡ್ಯಂತ್ರ ಮತ್ತು ವಿಡಿಯೋ ರಾಜಕಾರಣ ಮಾಡುತ್ತವೆ. ಸೋಲಿನ ಹತಾಶೆಯಿಂದ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ" ಎಂದು ಕಿಡಿಕಾರಿದೆ.
"ರಾಜ್ಯದ ಮೂರೂ ಸ್ಥಾನಗಳು ಬಿಜೆಪಿ ಪಾಲಾಗಲಿವೆ. ಈ ಮೂಲಕ ಸಿದ್ದರಾಮಯ್ಯ ಅವರು ಅಡ್ರಸ್ ಇಲ್ಲದ ನಾಯಕರಾಗಲಿದ್ದಾರೆ" ಎಂದು ತಿಳಿಸಿದೆ.
ಮಸ್ಕಿ ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಎಪ್ರಿಲ್ 12ರ ಸೋಮವಾರ ನಡೆದ ಮಹಿಳಾ ಸಮಾವೇಶದಲ್ಲಿ ನಳಿನ್ ಕುಮಾರ್ ಕಟೀಲ್ ಅವರು ಪಾಲ್ಗೊಂಡಿದ್ದು, ಈ ಸಂದರ್ಭದಲ್ಲಿ ರಾಜ್ಯ ಸಹ ಉಸ್ತುವಾರಿ ಶ್ರೀಮತಿ ಅರುಣಾ ಡಿ.ಕೆ, ಸಚಿವರು, ಶಾಸಕರು, ಮಹಿಳಾ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.