ಬೆಂಗಳೂರು, ಏ.13 (DaijiworldNews/HR): "ಬಿಜೆಪಿ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಅವರ ಆರೋಪಕ್ಕೆ ಪುಷ್ಠಿ ಕೊಡುವಂತೆ ಬಿಜೆಪಿಯು ಉಪ ಚುನಾವಣಾ ಕ್ಷೇತ್ರಗಳಲ್ಲಿ ಭ್ರಷ್ಟಾಚಾರದ ಹಣ ಹೊಳೆಯನ್ನೇ ಹರಿಸುತ್ತಿದೆ" ಎಂದು ಕಾಂಗ್ರೆಸ್ ಆರೋಪಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, "ಬಿಜೆಪಿಯು ಉಪ ಚುನಾವಣಾ ಕ್ಷೇತ್ರಗಳಲ್ಲಿ ಭ್ರಷ್ಟಾಚಾರದ ಹಣ ಹೊಳೆಯನ್ನೇ ಹರಿಸುತ್ತಿದ್ದು, ಈಗ ಐಟಿ, ಇಡಿ ಸಂಸ್ಥೆಗಳು ಏನು ಮಾಡುತ್ತಿವೆ? ಈ ಹಣ ಎಲ್ಲಿಂದ ಬಂತು? ಚುನಾವಣಾ ಆಯೋಗ ಕಣ್ಮುಚ್ಚಿ ಕುಳಿತಿರುವುದೇಕೆ? ಆಡಳಿತ ಪಕ್ಷದ ಶಾಸಕರ ಈ ಆರೋಪ ಗಂಭೀರ ಎನಿಸಲಿಲ್ಲವೇ?" ಎಂದು ಪ್ರಶ್ನಿಸಿದೆ.
ಇನ್ನು "ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್ನಂತಿದ್ದು, ಹಣದಿಂದ ಶಾಸಕರನ್ನೂ ಖರೀದಿಸುತ್ತದೆ, ಮತಗಳನ್ನೂ ಖರೀದಿಸುತ್ತದೆ", ಮಸ್ಕಿ ಕ್ಷೇತ್ರದ ಮತದಾರರಿಗೆ ನಂದೀಶ್ ರೆಡ್ಡಿ ಹಣ ಹಂಚಿದ ವಿಡಿಯೋ ಇದು ಎಂದು ವಿಡಿಯೋವೊಂದನ್ನು ಟ್ವೀಟ್ ಮಾಡಿದ್ದಾರೆ.
ಚುನಾವಣೆಯಲ್ಲಿ ಬಿಜೆಪಿಯು ಹಣದ ಹೊಳೆ ಹರಿಸಿದ್ದು ಜಗತ್ತಿಗೆ ತಿಳಿದರೂ ಮುಖ್ಯ ಚುನಾವಣಾ ಅಧಿಕಾರಿಗಳ ಕಣ್ಣಿಗೆ ಕಾಣಲಿಲ್ಲವೇ? ಕಂಡರೂ ಜಾಣ ಕುರುಡೇ? ಎಂದು ಪ್ರಶ್ನಿಸಿದೆ.