ನವದೆಹಲಿ, ಎ.13 (DaijiworldNews/PY): ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿರುವ ಸುಶೀಲ್ ಚಂದ್ರ ಅವರು ಎಪ್ರಿಲ್ 13ರ ಮಂಗಳವಾರದಂದು ಅಧಿಕಾರ ಸ್ವೀಕರಿಸಿದರು.
ಸುಶೀಲ್ ಚಂದ್ರ ಅವರು 2022ರ ಮೇ 14ರವರೆಗೆ ಚುನಾವಣಾ ಆಯೋಗದ ಮುಖ್ಯ ಆಯಕ್ತರಾಗಿ ಕಾರ್ಯನಿರ್ವಹಿಸಲಿದ್ದಾರೆ. 2019ರಲ್ಲಿ ಇವರು ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದರು. ಪ್ರಸ್ತುತ ಅವರು ಮುಖ್ಯ ಚುನಾವಣಾ ಆಯುಕ್ತರಾಗಿ ಬಡ್ತಿ ಪಡೆದಿದ್ದಾರೆ.
ಸೋಮವಾರ ಮುಖ್ಯ ಚುನಾವಣಾ ಆಯುಕ್ತರಾಗಿದ್ದ ಸುನಿಲ್ ಅರೋರಾ ಅವರ ಅಧಿಕಾರಾವಧಿ ಅಂತ್ಯಗೊಂಡಿತು. ತೆರವಾಗಿದ್ದ ಈ ಸ್ಥಾನಕ್ಕೆ ಸುಶೀಲ್ ಚಂದ್ರ ಅವರನ್ನು ನೇಮಕ ಮಾಡಲಾಗಿದೆ.
ಸುಶೀಲ್ ಅವರು ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಳ್ಳುವ ಮೊದಲು ಸೆಂಟ್ರಲ್ ಬೋರ್ಡ್ ಆಫರ್ ಡೈರೆಕ್ಟ್ ಟ್ಯಾಕ್ಸ್ನ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.
ಸುಶೀಲ್ ಚಂದ್ರ ಅವರ ಅಧಿಕಾರಾವಧಿಯಲ್ಲಿ ಉತ್ತರ ಪ್ರದೇಶ, ಪಂಜಾಬ್, ಗೋವಾ, ಉತ್ತರಾಖಂಡ ಹಾಗೂ ಮಣಿಪುರ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿದೆ.