ಮಸ್ಕಿ, ಏ.13 (DaijiworldNews/HR): ಕರ್ನಾಟಕದಲ್ಲಿ ಮುಂಬರುವ 2023 ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ವನಾಶವಾಗುವುದರಲ್ಲಿ ಯಾವುದೇ ಸಂದೇಶಹವಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಮೈಸೂರಿನ ವರುಣಾ ಕ್ಷೇತ್ರದಲ್ಲಿ ಚುನಾವಣೆ ಗೆಲ್ಲಲಾಗದ ಸಿದ್ದರಾಮಯ್ಯ ಮಸ್ಕಿಯಲ್ಲಿ ಬಂದು ಕಾಂಗ್ರೆಸ್ ಗೆಲ್ಲುತ್ತದೆ ಎಂದು ಭಾಷಣ ಮಾಡುತ್ತಾರೆ. 50 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಒಂದೇ ಒಂದು ಸ್ಥಾನಕ್ಕೆ ಸಿಮೀತವಾಗಿದೆ. ಕಾಂಗ್ರೆಸ್ನ ಆಡಳಿತದಿಂದ ಬೆಸತ್ತು 17 ಜನ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರ ಬಂದರೆ ಹೊರತು ಯಾವುದೇ ಹಣದ ಆಸೆಗಾಗಿ ಅಲ್ಲ" ಎಂದರು.
ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ಅಭಿವೃದ್ಧಿ ಮಾಡಲು ಸಾದ್ಯವೇ?ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಸರ್ಕಾರ ತನ್ನ ಅಧಿಕಾರದಲ್ಲಿ ನಿದ್ದೆ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ" ಎಂದು ಹೇಳಿದ್ದಾರೆ.
ಬಳಿಕ ಮಾತನಾಡಿದ ಸಚಿವ ಮುರುಗೇಶ ನಿರಾಣಿ, "ಮಹಿಳೆಯರಿಗಾಗಿ ಪ್ರಧಾನಿ ನರೇಂದ್ರ ಮೋದಿ ಹೆಚ್ಚಿನ ಅನುದಾನ ನೀಡುವ ಮೂಲಕ ಅವರ ಕಲ್ಯಾಣಕ್ಕೆ ಮುಂದಾಗಿದ್ದಾರೆ" ಎಂದಿದ್ದಾರೆ.