ಶ್ರೀನಗರ, ಎ.13 (DaijiworldNews/PY): ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ನಡೆದ ಪ್ರತ್ಯೇಕ ಶೋಧ ಕಾರ್ಯಾಚರಣೆಗಳಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರು ಸೇರಿದಂತೆ ಮೂವರು ಶಂಕಿತ ಉಗ್ರರನ್ನು ಬಂಧಿಸಿವೆ ಎಂದು ಅಧಿಕೃತ ಮೂಲಗಳು ಮಂಗಳವಾರ ತಿಳಿಸಿವೆ.
ಸಲೀಂ ಯುಸೂಫ್ ರಾಥರ್ ಹಾಗೂ ಇಕ್ಲಾಕ್ ಅಹ್ಮದ್ ಶೇಖ್, ಶೌಕತ್ ಅಹ್ಮದ್ ಗನಿ, ಮೊಹಮ್ಮದ್ ಯಾಸೀನ್ ರಾಥರ್ ಹಾಗೂ ಗುಲಾಮ್ ನಬಿ ರಾಥರ್ ಎಂಬ ಮೂವರು ಸ್ಥಳೀಯ ಶಂಕಿತ ಉಗ್ರರನ್ನು ಬಂಧಿಸಲಾಗಿದೆ.
ಕುಪ್ವಾರಾದ ಹಂದ್ವಾರದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ವಿವಿದ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದ್ದರು. ಈ ವೇಳೆ ಉಗ್ರರನ್ನು ಬಂಧಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಹೆಚ್ಚಿನ ತನಿಖೆ ಪ್ರಾರಂಭಿಸಿದ್ದಾರೆ ಎಂದು ತಿಳಿಸಿದ್ದಾರೆ.