ಬೆಂಗಳೂರು, ಏ.14 (DaijiworldNews/HR): ಸಿಲಿಕಾನ್ ಸಿಟಿಯ ಜೆಪಿ ನಗರದಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕಾಲಿಗೆ ಗುಂಡು ಹಾರಿಸುವ ಮೂಲಕ ಬಂಧಿಸಿದ್ದಾರೆ.
ಸಾಂಧರ್ಭಿಕ ಚಿತ್ರ
ಆರೋಪಿಯನ್ನು ಮಂಜುನಾಥ್ ಅಲಿಯಾಸ್ ಅಂಬಾರಿ ಎಂದು ಗುರುತಿಸಲಾಗಿದೆ.
ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ಮಂಜುನಾಥ್ ಕಾಲಿಗೆ ಇನ್ಸ್ಪೆಕ್ಟರ್ ಕಿಶೋರ್ ಫೈರಿಂಗ್ ಮಾಡಿ ಆತನನ್ನು ಸೆರೆ ಹಿಡಿದಿದ್ದಾರೆ.
ಆರೋಪಿಯು ಮನೆಯಲ್ಲಿದ್ದ ಹಣ, ಮೊಬೈಲ್, ಚಿನ್ನಾಭರಣವನ್ನು ದೋಚುವುದಕ್ಕಾಗಿ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಡಬಲ್ ಮರ್ಡರ್ ಮಾಡಿದ್ದ ಕೇಸ್ ಸಂಬಂಧ ಆರೋಪಿ ಮಂಜುನಾಥ್ ನ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆ ದಾಳಿ ಮಾಡಿ ಆರೋಪಿ ಪರಾರಿಗೆ ಯತ್ನಿಸಿದ್ದಾನೆ.
ಶರಣಾಗುವಂತೆ ಸೂಚಿಸಿದರೂ ತಪ್ಪಿಸಿಕೊಳ್ಳಲು ಯತ್ನಿಸಿದಕ್ಕೆ ಇನ್ಸ್ಪೆಕ್ಟರ್ ಕಿಶೋರ್ ಆರೋಪಿ ಕಾಲಿಗೆ ಗುಂಡು ಹಾರಿಸಿ ಆತನನ್ನು ಬಂಧಿಸಿದ್ದು, ಆತನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಆರೋಪಿ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ಕೇಸ್ ದಾಖಲಾಗಿವೆ.