ನವದೆಹಲಿ, ಎ.14 (DaijiworldNews/PY): ದೇಶದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಪರಿಸ್ಥಿತಿ ಸಂಬಂಧ ಚರ್ಚೆ ನಡೆಸಲು ಎಪ್ರಿಲ್ 17ರಂದು ಕಾಂಗ್ರೆಸ್ ಪಕ್ಷ ಕಾರ್ಯಕಾರಿ ಸಮಿತಿಯ ಸಭೆ ಕರೆದಿದೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರ ಪತ್ರವೊಂದರಲ್ಲಿ, ವಿಡಿಯೋ ಕಾನ್ಫರೆನ್ಸ್ ಮುಖೇನ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ಎಪ್ರಿಲ್ 17ರ ಶನಿವಾರ ನಡೆಯುವ ಸಭೆಯಲ್ಲಿ ದೇಶದಲ್ಲಿ ಕೊರೊಾನ ಪ್ರಕರಣಗಳ ಏರಿಕೆಯ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಕೊರೊನಾದ ಎರಡನೇ ಅಲೆಯು ಈಗಾಗಲೇ ದೇಶದಲ್ಲಿ 13.7 ಮಿಲಿಯನ್ ಜನರ ಮೇಲೆ ಪರಿಣಾಮ ಬೀರಿದ್ದು, ಜಾಗತಿಕ ಪ್ರಕರಣದಲ್ಲಿ ಇದು ಶೇ.10ರಷ್ಟಿದೆ. ಈ ಹಿನ್ನೆಲೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ಇಬ್ಬರೂ ಪ್ರಧಾನಮಂತ್ರಿಗೆ ಪತ್ರ ಬರೆದಿದ್ದು, ಕೊರೊನಾ ಬಿಕ್ಕಟ್ಟಿನ ನಿಯಂತ್ರಣಕ್ಕೆ ಕ್ರಮಗಳನ್ನು ಸೂಚಿಸಿದ್ದಾರೆ ಎನ್ನಲಾಗಿದೆ.