ಬೆಂಗಳೂರು, ಎ.14 (DaijiworldNews/PY): ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಲವ್ ಮಾಕ್ಟೇಲ್ ಸಿನಿಮಾದ ಖ್ಯಾತ ಜೋಡಿ ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಬಗ್ಗೆ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ನನ್ನ ಹಾಗೂ ಮಿಲನಾ ಕೊರೊನಾ ಪರೀಕ್ಷೆಯ ವರದಿ ಬಂದಿದ್ದು, ಇಬ್ಬರಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ನಮ್ಮ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರು ದಯವಿಟ್ಟು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ" ಎಂದು ಮನವಿ ಮಾಡಿದ್ದಾರೆ.
ಇತ್ತೀಚೆಗೆ ಬಾಲಿವುಡ್ ನಟ ಅಕ್ಷಯ್ ಕುಮಾರ್, ಅಜಯ್ ದೇವಗನ್, ಗೋವಿಂದ್ ಹಾಗೂ ನಟಿ ಕತ್ರಿನಾ ಕೈಫ್ ಸೇರಿದಂತೆ ಹಲವು ತಾರೆಯರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು.
ಅಕ್ಷಯ್ ಕುಮಾರ್ ಕೊರೊನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದು, ಕಳೆದ ಎರಡು ದಿನಗಳ ಹಿಂದೆ ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ವಾಪಾಸ್ಸಾಗಿದ್ದಾರೆ.