ಪಶ್ಚಿಮಬಂಗಾಳ, ಏ.14 (DaijiworldNews/HR): ಬಂಗಾಳದ ನಾಲ್ಕನೇ ಹಂತದ ಚುನಾವಣೆಯ ವೇಳೆಗೆ ಕೂಚ್ಬಿಹಾರ್ನಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ನಡೆಸಿದ ಗುಂಡಿನ ದಾಳಿಯ ಬಗ್ಗೆ ಸರ್ಕಾರ ಸಂಪೂರ್ಣ ತನಿಖೆ ನಡೆಸಲಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಮೃತರ ಕುಟುಂಬದವರನ್ನು ಬುಧವಾರ ಭೇಟಿಯಾಗಿ "ನಾಲ್ವರ ಹತ್ಯೆಗೆ ಕಾರಣರಾದ ಪ್ರತಿಯೊಬ್ಬರನ್ನೂ ಪತ್ತೆ ಹಚ್ಚಿ ಕಾನೂನು ಪ್ರಕಾರ ಶಿಕ್ಷೆ ಕೊಡಿಸಲಾಗುತ್ತದೆ" ಎಂದು ಭರವಸೆ ನೀಡಿದರು.
ಇನ್ನು ಮತದಾನ ಕೇಂದ್ರದ ಹೊರಗೆ ಗುಂಡಿನ ದಾಳಿಯಿಂದ ಮೃತಪಟ್ಟ ಆನಂದ್ ಬರ್ಮನ್(18) ಅವರ ಕುಟುಂಬಕ್ಕೂ ನ್ಯಾಯ ದೊರಕಿಸಿಕೊಡುವುದಾಗಿ ಮಮತಾ ಭರವಸೆ ನೀಡಿದ್ದಾರೆ.
ಏಪ್ರಿಲ್ 10ರಂದು ನಾಲ್ಕನೇ ಹಂತದ ಚುನಾವಣೆಯಲ್ಲಿ ಮತದಾನ ನಡೆಯುವಾಗ ನಡೆದ ಘರ್ಷಣೆ ಸಂದರ್ಭದಲ್ಲಿ ಆತ್ಮರಕ್ಷಣೆಗಾಗಿ ಸಿಐಎಸ್ಎಫ್ನವರು ಗುಂಡು ಹಾರಿಸಿದ ಪರಿಣಾಮ ನಾಲ್ವರು ಮೃತಪಟ್ಟಿದ್ದರು.