ಅಹಮದಾಬಾದ್, ಏ.14 (DaijiworldNews/HR): "ಭವಿಷ್ಯದ ದೃಷ್ಟಿಯಿಂದ ರೂಪಿಸಿರುವಂತಹ ರಾಷ್ಟ್ರೀಯ ಶಿಕ್ಷಣ ನೀತಿಯು ಜಾಗತಿಕ ಮಟ್ಟದ ಮಾನದಂಡಗಳನ್ನು ಹೊಂದಿದೆ" ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.
ಈ ಕುರಿತು ಭಾರತೀಯ ವಿಶ್ವವಿದ್ಯಾಲಯಗಳ ಸಂಘಟನೆಯ 95ನೇ ವಾರ್ಷಿಕ ಸಭೆ ಮತ್ತು ಕುಲಪತಿಗಳ ರಾಷ್ಟ್ರೀಯ ಸೆಮಿನಾರ್ನಲ್ಲಿ ವಿಡಿಯೊ ಕಾನ್ಫೆರೆನ್ಸ್ ಮೂಲಕ ಮಾತನಾಡಿದ ಅವರು, " ಭಾರತಕ್ಕೆ ಪ್ರಜಾಪ್ರಭುತ್ವದ ತಾಯಿ ಎಂದು ಕರೆಯಿಸಿಕೊಳ್ಳಲು ಹೆಮ್ಮೆಇದೆ. ಪ್ರಜಾಪ್ರಭುತ್ವದ ಮೌಲ್ಯಗಳು ನಮ್ಮ ಸಾಮಾಜಿಕ ಜೀವನದಲ್ಲಿ ಹಾಸುಹೊಕ್ಕಿವೆ" ಎಂದರು.
ಇನ್ನು "ಬಾಬಾಸಾಹೇಬ್ ಅಂಬೇಡ್ಕರ್ ಅವರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮುಂದುವರಿಸಿಕೊಂಡು ಹೋಗಲು ಉತ್ತಮ ಅಡಿಪಾಯ ಹಾಕಿಕೊಟ್ಟಿದ್ದಾರೆ" ಎಂದಿದ್ದಾರೆ.
"ಭಾರತವು ಆತ್ಮನಿರ್ಭರ ಪಥದಲ್ಲಿ ಸಾಗುತ್ತಿರುವುದರಿಂದ ಕೌಶಲ ಹೊಂದಿದ ಯುವಕರ ಪಾತ್ರವು ಭಾರತ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ" ಎಂದು ಹೇಳಿದ್ದಾರೆ.