ಬೆಂಗಳೂರು, ಏ.14 (DaijiworldNews/HR): ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕಾರಣ ಕೇಂದ್ರ ಸರ್ಕಾರ ಸಿಬಿಎಸ್ಇ ಯ ಹತ್ತನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ರದ್ದು ಮಾಡಿದ್ದು, ಇದರೊಂದಿಗೆ 12ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ಮುಂದೂಡಿಕೆ ಮಾಡಿದೆ.
ಈ ಹಿನ್ನೆಲೆಯಲ್ಲಿ ಕರ್ನಾಟಕದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಲ್ಲಿ ಗೊಂದಲ ಉಂಟಾಗಿದ್ದು, ಇದಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ನಮ್ಮ ರಾಜ್ಯದ ಎಸ್ಎಸ್ಎಲ್ ಸಿ ಪರೀಕ್ಷೆಗಳು ಪ್ರಾರಂಭ ವಾಗಬೇಕಿರುವುದು 21.6.2021 ರಿಂದ, ಅಂದರೆ ಜೂನ್ 21 ರಿಂದ. ಆದ್ದರಿಂದ ನಮ್ಮ ರಾಜ್ಯದಲ್ಲಿ ಸಿಬಿಎಸ್ಇ ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು" ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.