ಬೆಂಗಳೂರು, ಏ. 14 (DaijiworldNews/SM): ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಿಬಿಎಸ್ಇ 10ನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. ಈ ನಡುವೆ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ರದ್ದತಿ ಬಗ್ಗೆ ಚರ್ಚೆಯಾಗುತ್ತಿದ್ದು, ಸದ್ಯಕ್ಕೆ ಅಂತಹ ಯಾವುದೇ ಯೋಚನೆ ಇಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
"ಸಿಬಿಎಸ್ಇ ನಿರ್ಧಾರದ ಹಿನ್ನೆಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳ ರದ್ದತಿಗೆ ಸಂಬಂಧಿಸಿದಂತೆ ರಾಜ್ಯವು ಏನನ್ನೂ ನಿರ್ಧರಿಸಿಲ್ಲ. ಈ ಬಗ್ಗೆ ಸೂಕ್ತವಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡುವ ಮೂಲಕ ಸ್ಪಷ್ಟನೆ ನೀಡಿರುವ ಸಚಿವರು "ಸಿಬಿಎಸ್ಇ ಹತ್ತನೇ ತರಗತಿಗಳ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ನಮ್ಮ ರಾಜ್ಯದ ಎಸ್ಎಸ್ಎಲ್ಸಿ ಪರೀಕ್ಷೆಗಳ ಕುರಿತು ಚರ್ಚೆಗಳಾಗುತ್ತಿವೆ. ಸದ್ಯ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಶಿಘ್ರದಲ್ಲೇ ಚರ್ಚಿಸಿ ತಿಳಿಸುವುದಾಗಿ ಸಚಿವರು ಸ್ಪಷ್ಟಪಡಿಸಿದ್ದಾರೆ.