ಬೆಂಗಳೂರು, ಏ.16 (DaijiworldNews/HR): ಹಿರಿಯ ನಟ ದ್ವಾರಕೀಶ್ ಅವರ ಪತ್ನಿ ಅಂಬುಜಾ ದ್ವಾರಕೀಶ್ (80) ಅವರು ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಅಂಬುಜಾ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತಿದ್ದು, ಇಂದು ಮಧ್ಯಾಹ್ನ ಹೆಚ್ಎಸ್ಆರ್ ಲೇಔಟ್ನ ಮನೆಯಲ್ಲಿ ಸಾವನ್ನಪ್ಪಿದ್ದು, ದ್ವಾರಕೀಶ್ ಅವರ ಕುಟುಂಬ ದುಃಖದ ಮಡುವಿನಲ್ಲಿದೆ.
ಮೃತರು ಐವರು ಪುತ್ರರನ್ನು ಅಗಲಿದ್ದು, ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.