ದಾವಣಗೆರೆ, ಏ.16 (DaijiworldNews/HR): ಶಾಸಕರ ಮನೆ ಮುಂದೆ ಧರಣಿ ನಡೆಸುತ್ತಿರುವ ಸಾರಿಗೆ ನೌಕರರ ಅಹವಾಲು ಸ್ವೀಕರಿಸಿದ ಎಂ.ಪಿ.ರೇಣುಕಾಚಾರ್ಯ, ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಾರಿಗೆ ನೌಕರರ ಮನವಿ ಸ್ವೀಕರಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕೋಡಿಹಳ್ಳಿ ಚಂದ್ರಶೇಖರ್ ಒಬ್ಬ 420ಯಾಗಿದ್ದು, ಆತ ಕಾಂಗ್ರೆಸ್ ಏಜೆಂಟ್ ಇದ್ದಂತೆ. ಆತನನ್ನು ಬಿಟ್ಟು ಮಾತುಕತೆಗೆ ಬನ್ನಿ. ನಾನು ನಿಮ್ಮ ಪರವಾಗಿ ನಿಂತು ಮುಖ್ಯಮಂತ್ರಿ ಬಳಿ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುತ್ತೇನೆ" ಎಂದು ಭರವಸೆ ನೀಡಿದ್ದಾರೆ.
ಇನ್ನು ಸಾರಿಗೆ ಮುಷ್ಕರದಿಂದ ಬಸ್ ಸಂಚಾರವಿಲ್ಲದೇ ಸಾರ್ವಜನಿಕರು ಸಂಕಷ್ಟಕ್ಕೀಡಾಗಿದ್ದು, ಕೊರೊನಾದಂತಹ ಸಂದರ್ಭದಲ್ಲಿ ಇಂತಹ ಮುಷ್ಕರ ಬೇಡ. ಪ್ರಯಾಣಿಕರ ನೋವನ್ನು ಅರಿತು ಕರ್ತವ್ಯಕ್ಕೆ ಹಾಜರಾಗಿ" ಎಂದು ಮನವಿ ಮಾಡಿಕೊಂಡಿದ್ದಾರೆ.