ಬೆಂಗಳೂರು, ಎ.17 (DaijiworldNews/PY): ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಕೊರೊನಾ ದೃಢಪಟ್ಟಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗುವುದೆಂದು ತಿಳಿದು ಬಂದಿದೆ.
ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಅವರು, "ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ" ಎಂದು ಮನವಿ ಮಾಡಿದ್ದಾರೆ.
ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇದರ ಬೆನ್ನಲ್ಲೇ ಇದೀಗ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರಿಗೂ ಕೊರೊನಾ ಸೋಂಕು ತಗುಲಿದೆ.
ಕೆಲ ದಿನಗಳ ಹಿಂದಷ್ಟೇ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಹಾಗೂ ಅವರ ಪತ್ನಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈಗಷ್ಟೇ ಚಿಕಿತ್ಸೆಯಿಂದ ಅವರು ಚೇತರಿಸಿಕೊಳ್ಳುತ್ತಿದ್ದು, ಇದೀಗ ಅವರ ಪುತ್ರ ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.