ನವದೆಹಲಿ, ಎ.17 (DaijiworldNews/PY): ದೇಶದಲ್ಲಿ ಕೊರೊನಾ ಸೋಂಕು ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 2,34 ಲಕ್ಷ ಮಂದಿಗೆ ಸೋಂಕು ತಗುಲಿದ್ದು, ಕೊರೊನಾ ಪೀಡಿತರ ಸಂಖ್ಯೆ 1,45 ಕೋಟಿ ಗಡಿ ದಾಟಿದೆ.
ಶುಕ್ರವಾರ ಒಂದೇ ದಿನ 1,341 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,75,649 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ಬಹಿರಂಗಗೊಳಿಸಿವೆ.
ಒಂದು ಕಡೆಕೊರೊನಾ ಸೋಂಕು ಪ್ರಕರಣಗಳ ಸಂಖೆಯ ಹೆಚ್ಚುತ್ತಿದ್ದರೆ, ಇನ್ನೊಂದು ಕಡೆ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಗಣನೀಯವಾಗಿ ಏರಿಕೆಕಂಡು ಬರುತ್ತಿದೆ. 1,45 ಕೋಟಿಗೂ ಅಧಿಕ ಕೊರೊನಾ ಸೋಂಕಿತರ ಪೈಕಿ ಈಗಾಗಲೇ 1,26 ಕೋಟಿ ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗಳಿಗೆ ವಾಪಾಸ್ಸಾಗುತ್ತಿದ್ದಾರೆ.
ದೇಶದಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ತಪಾಸಣೆ ಸಾಮರ್ಥ್ಯವನ್ನು ಕೂಡಾ ಹೆಚ್ಚಿಸಲಾಗಿದೆ. ಈವರೆಗೆ ಸುಮಾರು 26 ಕೋಟಿಗೂ ಅಧಿಕ ಮಂದಿಯ ಸ್ವಾಬ್ ಪರೀಕ್ಷೆ ಮಾಡಲಾಗಿದೆ.